ತ್ಯಾಗರ್ತಿ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನದಿಂದ ಅರಣ್ಯ ನಾಶದ ಜೊತೆಗೆ ರೈತರಿಗೂ ಸಂಕಷ್ಟ ಉಂಟಾಗುತ್ತದೆ ಎಂದು ಬಿಜೆಪಿ ಮುಖಂಡ ಮತ್ತು ಜಿ.ಪಂ. ಮಾಜಿ ಸದಸ್ಯ ರತ್ನಾಕರ ಹೊನಗೋಡು ಹೇಳಿದರು.
ಆನಂದಪುರದ ಮುಖ್ಯ ಬಸ್ ನಿಲ್ದಾಣದ ವೃತ್ತದಲ್ಲಿ ಮಂಗಳವಾರ ಶರವಾತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ನೆಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಇದೊಂದು ಅವೈಜ್ಞಾನಿಕ ಯೋಜನೆಯಾಗಿದ್ದು, ಈ ಯೋಜನೆಯಿಂದ ರೈತರು ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಂಡು ಬೀದಿಗೆ ಬೀಳುವಂತಾಗುತ್ತದೆ. ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕಾಮಗಾರಿ ನೆಪದಲ್ಲಿ ದೊಡ್ಡ ಮೊತ್ತದ ಹಣ ಲೂಟಿ ಮಾಡಲು ರೂಪಿಸಿದ ತಂತ್ರವಾಗಿದೆ. ಇದೊಂದು ನಿಷ್ಪ್ರಯೋಜಕ ಯೋಜನೆಯಾಗಿದ್ದು, ನೂರಾರು ರೈತರೊಂದಿಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುತ್ತೇವೆ ಎಂದರು.
ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಶಾಂತಕುಮಾರ ಗೌಡ, ಪ್ರಮುಖರಾದ ಜಿ.ಪಂ. ಮಾಜಿ ಸದಸ್ಯ ಭರ್ಮಪ್ಪ ಅಂದಾಸುರ, ಹಿರಣ್ಯಪ್ಪ ಸಂಗಣ್ಣನಕೆರೆ, ರವಿಕುಮಾರ ಗೌತಮಪುರ, ಧನರಾಜ್ ಭೈರಾಪುರ, ಗಂಗಾಧರ ಕೆಂಜಗಾಪುರ ಇನ್ನಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.