ADVERTISEMENT

ಬೆಂಗಳೂರಿಗೆ ಶರಾವತಿ ನದಿ ನೀರು ತರುವ ಯೋಜನೆ ಕೈಬಿಟ್ಟ ಸರ್ಕಾರ: ಹಾಲಪ್ಪ ಹೇಳಿಕೆ

ಶಾಸಕ ಹಾಲಪ್ಪ ಹರತಾಳು ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 13:44 IST
Last Updated 21 ಜೂನ್ 2020, 13:44 IST
ಎಚ್.ಹಾಲಪ್ಪ ಹರತಾಳು
ಎಚ್.ಹಾಲಪ್ಪ ಹರತಾಳು   

ಸಾಗರ: ಶರಾವತಿ ನದಿಯ ನೀರನ್ನು ಬೆಂಗಳೂರು ನಗರಕ್ಕೆ ಹರಿಸುವ ಯೋಜನೆಯ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಸ್ಪಷ್ಟಪಡಿಸಿದ್ದಾರೆ.

ಶನಿವಾರ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ‘ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆ ಕುರಿತು ಚರ್ಚೆ ಅಗತ್ಯವಿಲ್ಲ. ಏಕೆಂದರೆ ಯೋಜನೆಯ ಪ್ರಸ್ತಾಪವೇ ಈಗ ಸರ್ಕಾರದ ಮುಂದೆ ಇಲ್ಲ’ ಎಂದರು.

ತಾಲ್ಲೂಕಿನ ಬರೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಕಲ್ಲೊಡ್ಡು ಹಳ್ಳ ಹೊಸಕೆರೆ ನಿರ್ಮಾಣ ಯೋಜನೆಯನ್ನು ಕೂಡ ಕೈಬಿಡಲಾಗಿದೆ. ಪಕ್ಕದ ಶಿಕಾರಿಪುರ ತಾಲ್ಲೂಕಿನಲ್ಲಿ ಏತ ನೀರಾವರಿ ಯೋಜನೆ ಕೈಗೊಳ್ಳಲಾಗುತ್ತಿದ್ದು, ಸಾಗರ ತಾಲ್ಲೂಕಿನ ರೈತರಿಗೆ ಇದರಿಂದ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಶರಾವತಿ ಭೂಗರ್ಭ ಜಲವಿದ್ಯುತ್ ಯೋಜನೆ ಪರಿಸರಕ್ಕೆ ಮಾರಕ ಎಂಬ ದೂರುಗಳು ಕೇಳಿಬಂದಿವೆ. ಶೀಘ್ರ ಯೋಜನಾ ಪ್ರದೇಶಕ್ಕೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.