ಶಿಕಾರಿಪುರ: ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಪಾಲ್ಗೊಂಡು ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದು ವಶಕ್ಕೆ ಪಡೆದ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ.
ಪಟ್ಟಣದ ಪ್ರಗತಿ ನಗರದ ಶ್ರೀನಿವಾಸ್ (27) ಗುಂಡು ತಗುಲಿ ಗಾಯಗೊಂಡಿರುವ ಆರೋಪಿ.
ದೂಪದಹಳ್ಳಿ ಸಮೀಪ ಆರೋಪಿಯನ್ನು ಪತ್ತೆಹಚ್ಚಿದ ಮಾಲೂರು ಪೊಲೀಸರು, ಶರಣಾಗುವಂತೆ ಎಚ್ಚರಿಕೆ ನೀಡಿದರು. ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದಾಗ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕು ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಮಠದಲ್ಲಿ ಈಚೆಗೆ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಮಾಲೂರು ಪಿಎಸ್‌ಐ ಕುಮಾರ್ ಕಾರ್ಯಾಚರಣೆ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.