ADVERTISEMENT

ಶಿಕಾರಿಪುರ | ಹುಟ್ಟು ಹಬ್ಬಕ್ಕೆ ದುಂದುವೆಚ್ಚ ಬೇಡ: ಕಾಂಗ್ರೆಸ್‌ ಮುಖಂಡ ಸುರೇಶ್

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 2:56 IST
Last Updated 3 ಮಾರ್ಚ್ 2026, 2:56 IST
ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರ ವಿತರಿಸಲಾಯಿತು
ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರ ವಿತರಿಸಲಾಯಿತು   

ಶಿಕಾರಿಪುರ: ‘ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪರೀಕ್ಷಾ ಪರಿಕರ ವಿತರಿಸಿ ಶಿಕ್ಷಣ ಸಚಿವರ ಹುಟ್ಟುಹಬ್ಬ ಆಚರಿಸುತ್ತಿರುವುದು ಅಭಿಮಾನದ ಸಂಗತಿ’ ಎಂದು ಕಾಂಗ್ರೆಸ್‌ ಮುಖಂಡ ಸುರೇಶ್ ಗುಡ್ಡಳ್ಳಿ ಹೇಳಿದರು.

ತಾಲ್ಲೂಕಿನ ಕಲ್ಮನೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಉಳ್ಳಿ ಪೌಂಡೇಶನ್ ಆಯೋಜಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರ ವಿತರಿಸಿ ಮಾತನಾಡಿದರು. 

ಪ್ರತಿಯೊಬ್ಬರೂ ತಮ್ಮ ಹುಟ್ಟುಹಬ್ಬಕ್ಕೆ ದುಂದುವೆಚ್ಚ ಮಾಡುವ ಬದಲು ಅದೇ ಹಣ ಬಳಸಿ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಬೇಕು ಎಂದರು.

ADVERTISEMENT

ಮಧು ಬಂಗಾರಪ್ಪ ಸಚಿವರಾದ ನಂತರ ಪ್ರಾಥಮಿಕ, ಪ್ರೌಢ ಶಿಕ್ಷಣದಲ್ಲಿ ವಿದ್ಯಾರ್ಥಿಪರವಾದ ಬದಲಾವಣೆಗಳನ್ನು ತಂದಿದ್ದಾರೆ. ಉತ್ತಮ ಕೆಲಸಗಳೊಂದಿಗೆ ಶೈಕ್ಷಣಿಕ ಕ್ಷೇತ್ರ ಬಲಗೊಳಿಸುವ ಪ್ರಯತ್ನ ಶ್ಲಾಘನೀಯ. ಅದಕ್ಕಾಗಿ ವಿದ್ಯಾರ್ಥಿಗಳ ನಡುವೆ ಅವರ ಹುಟ್ಟುಹಬ್ಬ ಆಚರಿಸಲಾಗುತ್ತಿದೆ ಎಂದು ಉಳ್ಳಿ ಪೌಂಡೇಶನ್‌ನ ದರ್ಶನ್ ಹೇಳಿದರು.

ವಿದ್ಯಾರ್ಥಿಗಳಿಗೆ ಕೇಕ್ ವಿತರಿಸಲಾಯಿತು. ಮುಖಂಡರಾದ ಬಡಗಿ ಪಾಲಾಕ್ಷಪ್ಪ, ದಯಾನಂದ ಗಾಮ, ವಿರೇಶ್ ಜೋಗಿಹಳ್ಳಿ, ಕುಮಾರ್, ಪರಶುರಾಮ್, ಸಮೀರ್‌ಅಹಮದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಂ.ನಾಗರಾಜ್, ಶರತ್, ಯು.ಕೆ.ಸಾಮ್ರಾಟ್ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.