ADVERTISEMENT

ಶಿಕಾರಿಪುರ: ಪಂಚಾಯಿತಿಗಳ ಭ್ರಷ್ಟಾಚಾರ ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 4:22 IST
Last Updated 23 ಫೆಬ್ರುವರಿ 2026, 4:22 IST
ಶಿಕಾರಿಪುರ ತಾಲ್ಲೂಕಿನ ಹರಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು
ಶಿಕಾರಿಪುರ ತಾಲ್ಲೂಕಿನ ಹರಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು   

ಶಿಕಾರಿಪುರ: ‘ತಾಲ್ಲೂಕಿನ ಹರಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದು ಸಮಗ್ರ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಕೋಡಿಹಳ್ಳಿ, ಹುಣಸೇಕಟ್ಟೆ, ಸಹಸ್ರವಳ್ಳಿ, ಗುಡ್ಡದಹೊಸಳ್ಳಿ, ಹರಗಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 

‘ಕಾಮಗಾರಿ ನಡೆಸದೆ ನಕಲಿ ಬಿಲ್ ನೀಡಿ ಅನುದಾನ ಪಡೆಯಲಾಗಿದೆ. ಅನುದಾನವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಹಲವು ಭಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.  

ತಾಲ್ಲೂಕು ಪಂಚಾಯಿತಿ ಇಒ ನಾಗರಾಜ್ ಪ್ರತಿಭಟನಕಾರರ ಮನವಿ ಸ್ವೀಕರಿಸಿ ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಚಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಾನಕಪ್ಪ ಸೇರಿದಂತೆ ಹಲವರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.