ಕ್ರೀಡಾಕೂಟ
ಶಿಕಾರಿಪುರ: ಪಿಯು ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಆ. 18, 19ರಂದು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬಾಪೂಜಿ ವಿದ್ಯಾಸಂಸ್ಥೆ ಸಂಸ್ಥಾಪಕ ಬಿ.ಪಾಪಯ್ಯ ಹೇಳಿದರು.
ಬಾಪೂಜಿ ವಿದ್ಯಾಸಂಸ್ಥೆ ಈ ಬಾರಿಯ ಕ್ರೀಡಾಕೂಟದ ಆತಿಥ್ಯ ವಹಿಸಿದ್ದು, ಬೆಳಿಗ್ಗೆ 9ಕ್ಕೆ ಸಂಸದ ಬಿ.ವೈ.ರಾಘವೇಂದ್ರ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಶಾಸಕ ಬಿ.ವೈ.ವಿಜಯೇಂದ್ರ ಕ್ರೀಡಾಜ್ಯೋತಿ ಬೆಳಗಲಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪಿಯು ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ, ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್, ಉಪಾಧ್ಯಕ್ಷೆ ರೂಪಾ ಮಂಜುನಾಥ್, ತಹಶೀಲ್ದಾರ್ ಮಲ್ಲೇಶ ಬಿ. ಪೂಜಾರ್, ಸಬ್‌ಇನ್‌ಸ್ಪೆಕ್ಟರ್ ಎಚ್.ಶರತ್, ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದೇವಕುಮಾರ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಬಿ.ಬಂಗಾರಪ್ಪ, ದೈಹಿಕ ಶಿಕ್ಷಣಾಧಿಕಾರಿ ಪಿ.ವಿರೂಪಾಕ್ಷಪ್ಪ, ಪಿ.ಆರ್.ಪವಿತ್ರಾ, ಪ್ರಾಂಶುಪಾಲರಾದ ಮುಸ್ತಾಪ, ವೀರೇಂದ್ರಗೌಡ ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.