ADVERTISEMENT

ಶಿಕಾರಿಪುರ | ಜ.4ರಂದು 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

ಸಮ್ಮೇಳನ ಸರ್ವಾಧ್ಯಕ್ಷೆಯಾಗಿ ಹೇಮಾ ಬಣಕಾರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2024, 14:07 IST
Last Updated 2 ಜನವರಿ 2024, 14:07 IST
ಹೇಮಾ ಬಣಕಾರ
ಹೇಮಾ ಬಣಕಾರ   

ಶಿಕಾರಿಪುರ: ಪಟ್ಟಣದ ಅಕ್ಷರ ರೆಸಿಡೆನ್ಷಿಯಲ್ ಸ್ಕೂಲ್ ಆವರಣದಲ್ಲಿ ಜ.4ರಂದು ಬೆಳಿಗ್ಗೆ 10ಕ್ಕೆ ತಾಲ್ಲೂಕು ಮಟ್ಟದ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕೆ.ಎಸ್. ಹುಚ್ರಾಯಪ್ಪ ತಿಳಿಸಿದರು. 

ಪಟ್ಟಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಜಾನಪದ ಪರಿಷತ್, ಅಕ್ಷರ ವಿದ್ಯಾಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನ ಸರ್ವಾಧ್ಯಕ್ಷೆಯಾಗಿ ಅಕ್ಷರ ಪಿಯು ಕಾಲೇಜು ವಿದ್ಯಾರ್ಥಿನಿ ಹೇಮಾ ಬಣಕಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು. 

ಸಮ್ಮೇಳನವನ್ನು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ ಎಚ್.ಎಲ್. ಖುಷಿ ಉದ್ಘಾಟಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಡಾ.ಹಾಫೀಜ್ ಕರ್ನಾಟಕಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಮಂಜುನಾಥ್, ತಹಶೀಲ್ದಾರ್ ಮಲ್ಲೇಶಪ್ಪ ಬಿ. ಪೂಜಾರ್, ಅಕ್ಷರ ವಿದ್ಯಾಸಂಸ್ಥೆ ಕಾರ್ಯದರ್ಶಿ ಮಮತಾ ರವಿಕುಮಾರ್, ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಪಾಪಯ್ಯ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ರಘು, ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಲ್. ರಾಜು, ಸಾಂಸ್ಕೃತಿಕ ವೇದಿಕೆ ಗೌರವಾಧ್ಯಕ್ಷ ರಾಮಯ್ಯ, ಜಾನಪದ ಪರಿಷತ್ ಗೌರವಾಧ್ಯಕ್ಷ ಬನ್ನೂರು ಮಂಜಪ್ಪ ಪಾಲ್ಗೊಳ್ಳಲಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.