ADVERTISEMENT

ಶಿಕಾರಿಪುರ | ಕಾರುಗಳ ಡಿಕ್ಕಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 16:02 IST
Last Updated 16 ಏಪ್ರಿಲ್ 2025, 16:02 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಶಿಕಾರಿಪುರ: ಪಟ್ಟಣದ ಕುಮದ್ವತಿ ನದಿ ಸೇತುವೆ ಸಮೀಪ ಬುಧವಾರ ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ.

ADVERTISEMENT

ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ (40) ಮೃತರು.

ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು. ಕಾಂತರಾಜ್ ಹಾಗೂ ರೇಖಾ ಅವರಿಗೆ ತೀವ್ರ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.

ಇನ್ನೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಳಿಯಪ್ಪನ್, ಸೋಮಶೇಖರ್, ಸುರೇಶ್ ಕುಮಾರ್ ಹಾಗೂ ಯಮುನಪ್ಪ ಅವರಿಗೆ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.