
ಪ್ರಜಾವಾಣಿ ವಾರ್ತೆಶಿಕಾರಿಪುರ: ಗ್ರಾಮಸ್ಥರೊಬ್ಬರ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ₹ 1 ಲಕ್ಷ ಲಂಚ ಪಡೆಯುವಾಗ ತಾಲ್ಲೂಕಿನ ಚಿಕ್ಕಜಂಬೂರು ಗ್ರಾಮ ಆಡಳಿತಾಧಿಕಾರಿ ವಿಠ್ಠಲ ಕೋಲಾರ ಇಲ್ಲಿ ಶುಕ್ರವಾರ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಂಬೂರಿನ ಜಿಕ್ರಿಯಾ ಬೇಗ್ ಅವರು ತಮ್ಮ ತಂದೆಯ ಉಯಿಲು ಪತ್ರದಂತೆ ಜಮೀನಿನ ಖಾತೆ ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆಗೆ ₹ 4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಠ್ಠಲ, ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ ಲಂಚದ ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಆರೋಪಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್, ಇನ್‌ಸ್ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.