
ಪ್ರಜಾವಾಣಿ ವಾರ್ತೆ
ಕಮಲಾಕರ ಭಟ್
ಶಿವಮೊಗ್ಗ: ಬಾಲಕಿಯ ಮೈಮುಟ್ಟಿ ದೌರ್ಜನ್ಯ ಎಸಗಿದ ಆರೋಪದಡಿ ಜೋತಿಷಿ ಕಮಲಾಕರ ಭಟ್ಟ ವಿರುದ್ಧ ಇಲ್ಲಿನ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ಅವರಗೊಪ್ಪದಲ್ಲಿ ನಡೆದಿದ್ದ ವಸಂತ ನಾಯ್ಕ ಹತ್ಯೆ ಪ್ರಕರಣದ ಆರೋಪಿಯಾಗಿರುವ ಕಮಲಾಕರ ಭಟ್ಟ ಸದ್ಯ ಜೈಲಿನಲ್ಲಿದ್ದಾರೆ. ಅವರ ವಿರುದ್ಧ ಭಾನುವಾರ ರಾತ್ರಿ ಪೋಕ್ಸೊ ಕಾಯ್ದೆಯಡಿ ದೂರು ನೀಡಲಾಗಿದ್ದು, ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.