ಬೇಕರಿಯಲ್ಲಿ ಅಗ್ನಿ ಅವಘಡ
ಶಿವಮೊಗ್ಗ: ಸಮೀಪದ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಮುಂಭಾಗ ಗುರುವಾರ ತಡರಾತ್ರಿ ಬೇಕರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಬೇಕರಿಯಲ್ಲಿದ್ದ ಯಂತ್ರೋಪಕರಣ, ತಿನಿಸುಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಕೇಕ್ ಮನೆ ಬೇಕರಿಯಲ್ಲಿ ನಸುಕಿನ 3 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ.
ಅಕ್ಕಪಕ್ಕದ ಮನೆಯವರು, ಸ್ಥಳೀಯರು ಎಚ್ಚರವಾಗಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿರುವ ಶಂಕೆ ಇದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.