
ಪ್ರಜಾವಾಣಿ ವಾರ್ತೆ
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 28 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ 10 ವರ್ಷ ಕಠಿಣ ಶಿಕ್ಷೆ ಹಾಗೂ ₹1.30 ಲಕ್ಷ ದಂಡ ವಿಧಿಸಿದೆ.
ಪ್ರಕರಣದ ತನಿಖೆ ನಡೆಸಿದ್ದ ಆಗಿನ ತೀರ್ಥಹಳ್ಳಿ ಇನ್ ಸ್ಪೆಕ್ಟರ್ ಜೆ.ಅಶ್ವತ್ಥಗೌಡ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರದ ವತಿಯಿಂದ ₹4 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.