ಶಿವಮೊಗ್ಗ: ಪಾಕಿಸ್ತಾನದ ಹೆಸರು ಬಳಸಿ ವಿಡಿಯೊ ಮಾಡಿ ಧಾರ್ಮಿಕವಾಗಿ ಎರಡು ಸಮುದಾಯಗಳ ನಡುವೆ ದ್ವೇಷ ಬಿತ್ತಲು ಯತ್ನಿಸಿದ ಆರೋಪದ ಮೇಲೆ ಇಬ್ಬರ ವಿರುದ್ಧ ಭದ್ರಾವತಿಯ ಹಳೇ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.
ಹಳೇ ನಗರ ಠಾಣೆಯ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಮೂಲಕ ಪರಿಶೀಲನೆ ವೇಳೆ ಪ್ರಚೋದನಕಾರಿ ವಿಡಿಯೊ ಕಂಡು ಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕ್ರಮ ಕೈಗೊಳ್ಳಲಾಗಿದೆ. ಭದ್ರಾವತಿಯ ಸಾದತ್ ಕಾಲೊನಿ ನಿವಾಸಿ ಸೋಫಿಯಾನ್ ಹಾಗೂ ಆತನೊಂದಿಗೆ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಮತ್ತೊಬ್ಬ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.