
ಪ್ರಜಾವಾಣಿ ವಾರ್ತೆ
ಕಾಡಾನೆ
ಶಿವಮೊಗ್ಗ: ಕಾಡಾನೆ ದಾಳಿಗೆ ರಿಪ್ಪನ್ ಪೇಟೆ ಬಳಿಯ ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ನಿವಾಸಿ ತಿಮ್ಮಪ್ಪ ಮಡಿವಾಳ (54) ಎಂಬುವವರು ಮೃತಪಟ್ಟಿದ್ದಾರೆ.
ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಕಾಡಿನಿಂದ ತಿಮ್ಮಪ್ಪ ಬರುವಾಗ ಈ ಘಟನೆ ನಡೆದಿದೆ.
ಸ್ಥಳಕ್ಕೆ ವನ್ಯಜೀವಿ ವಿಭಾಗದ ಸಿಸಿಎಫ್ ಹನುಮಂತಪ್ಪ, ಡಿ ಎಫ್ ಓ ಪ್ರಸನ್ನ ಪಟಗಾರ, ಎಸಿಎಫ್ ಸುರೇಶ್, ಹಣಗೆರೆ ವಿಜಯ್ ಕುಮಾರ್, ಮುಗುಡ್ತಿ ವನ್ಯಜೀವಿ ವಿಭಾಗದ ಆರ್‌ಎಫ್‌ಒ ಪವನ್ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೃತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿ ನೀಡಿ ₹ 1 ಲಕ್ಷ ಪರಿಹಾರ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.