ADVERTISEMENT

ಶಿವಮೊಗ್ಗ: ಠಾಣೆಯಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್‌ಸ್ಟೆಬಲ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 4:19 IST
Last Updated 8 ಜನವರಿ 2026, 4:19 IST
<div class="paragraphs"><p>ಮೊಹಮದ್‌ ಝಕ್ರಿಯ</p></div>

ಮೊಹಮದ್‌ ಝಕ್ರಿಯ

   

– ಪ್ರಜಾವಾಣಿ ಚಿತ್ರ

ಶಿವಮೊಗ್ಗ: ಇಲ್ಲಿನ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಬುಧವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು ದಿನದಿಂದ ಮೊಹಮದ್‌ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಕರ್ತವ್ಯಕ್ಕೆ ಮರಳಿದ್ದರು. ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಕರ್ತವ್ಯ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು.

ರಾತ್ರಿ ಠಾಣೆಯೊಳಗಿನ ಹಿಂಬದಿಯ ಸೆಲ್‌ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ಎಸ್ಪಿ ಬಿ.ನಿಖಿಲ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.