ADVERTISEMENT

ಶಿವಮೊಗ್ಗ ಸುತ್ತಮುತ್ತ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 15:17 IST
Last Updated 8 ಏಪ್ರಿಲ್ 2020, 15:17 IST

ಶಿವಮೊಗ್ಗ: ಶಿವಮೊಗ್ಗ ನಗರ ಹಾಗೂ ಭದ್ರಾವತಿ ತಾಲ್ಲೂಕು ಗ್ರಾಮೀಣ ಭಾಗದಲ್ಲಿ ಬುಧವಾರ ರಾತ್ರಿ ಗುಡುಗು ಸಹಿತ ಭಾರಿ ಸುರಿಯಿತು.

ಶಿವಮೊಗ್ಗ ನಗರದ ಕೆಲವು ಪ್ರದೇಶಗಳಲ್ಲಿ ರಸ್ತೆ ಮೇಲೆ ನೀರು ಹರಿದಿದೆ. ಗಾಳಿಯ ಪರಿಣಾಮ ಗ್ರಾಮೀಣ ಭಾಗದಲ್ಲಿ ಮೆಕ್ಕೆಜೋಳದ ಬೆಳೆಗೆ ಸಾಕಷ್ಟು ಹಾನಿಯಾಗಿದೆ. ಜಿಲ್ಲೆಯ ಉಳಿದೆಡೆ ಇಡೀ ದಿನ ಮೋಡ ಕವಿದ ವಾತಾವರಣವಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT