ADVERTISEMENT

ಶಿಮುಲ್ ಚುನಾವಣೆ ವೇಳೆ ಗಲಾಟೆ: ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2019, 19:35 IST
Last Updated 29 ಏಪ್ರಿಲ್ 2019, 19:35 IST
ಶಿವಮೊಗ್ಗ ತಾಲ್ಲೂಕಿನ ಮಾಚೇನಹಳ್ಳಿಯ ಶಿಮುಲ್ ಕಚೇರಿಯಲ್ಲಿ ಸೋಮವಾರ ಚುನಾವಣೆಯ ವೇಳೆ ಗಲಾಟೆ ನಡೆಸುತ್ತಿದ್ದ ಗುಂಪುಗಳನ್ನು ಚದುರಿಸುತ್ತಿರುವ ಪೊಲೀಸರು.
ಶಿವಮೊಗ್ಗ ತಾಲ್ಲೂಕಿನ ಮಾಚೇನಹಳ್ಳಿಯ ಶಿಮುಲ್ ಕಚೇರಿಯಲ್ಲಿ ಸೋಮವಾರ ಚುನಾವಣೆಯ ವೇಳೆ ಗಲಾಟೆ ನಡೆಸುತ್ತಿದ್ದ ಗುಂಪುಗಳನ್ನು ಚದುರಿಸುತ್ತಿರುವ ಪೊಲೀಸರು.   

ಶಿವಮೊಗ್ಗ: ದಾವಣಗೆರೆ, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ(ಶಿಮುಲ್) ಚುನಾವಣೆಯ ವೇಳೆ ವಿವಿಧ ಪಕ್ಷಗಳ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ತಾಲ್ಲೂಕಿನ ಮಾಚೇನಹಳ್ಳಿಯ ಶಿಮುಲ್ ಕಚೇರಿಯಲ್ಲಿ ಸೋಮವಾರ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯುತ್ತಿತ್ತು. ಈ ವೇಳೆಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಬಣಕಾರ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹನುಮನಹಳ್ಳಿ ಬಸವರಾಜ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಸ್ಪರ ಮಾತು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.ಈ ವೇಳೆ ಪೊಲೀಸರು ಗುಂಪು ಚದುರಿಸುವ ಯತ್ನ ಮಾಡಲು ಮುಂದಾಗಿದ್ದಾರೆ. ಆದರೂ ಪೊಲೀಸರ ಮಾತು ಕೇಳದೆ ಕೆಲವರುಕೊರಳ ಪಟ್ಟಿ ಹಿಡಿದು ಹೊಡೆದಾಟ ನಡೆಸಲು ಶುರು ಮಾಡಿದ್ದಾರೆ. ಈ ಸಂದರ್ಭ ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಾಠಿ ಬೀಸಿದ್ದಾರೆ.

ಪೊಲೀಸರ ಲಾಠಿಯ ಏಟಿಗೆ ಗುಂಪಿನಲ್ಲಿದ್ದವರು ಚೆಲ್ಲಾಪಿಲ್ಲಿಯಾಗಿ ಓಡಿ ಹೋದರು. ನಂತರ ಪೊಲೀಸರು ಶಿಮುಲ್ ಮುಂಭಾಗ ನಿಂತಿದ್ದ ಜನರನ್ನು ಚದುರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.