ಹೊಸನಗರ: ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಎನ್.ಇಂದ್ರೇಶ್ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಇದೇ ವೇಳೆ ನೂತನ ಉಪಾಧ್ಯಕ್ಷರಿಗೆ ಗ್ರಾಮಸ್ಥರು ಅಭಿನಂದಿಸಿದರು. ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಗೌಡ, ಚಿದಂಬರ್ ಹೂವಿನ ಕೋಣೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ದೀಪಿಕಾ, ನಾರಾಯಣಪ್ಪ, ಚೂಡಪ್ಪ, ಶಂಕರ, ಯಲ್ಲಪ್ಪ, ನಾಸೀರ್, ಯೋಗಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.