ADVERTISEMENT

ಯುವ ಸಮುದಾಯ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿ

ರಟ್ಟಿಹಳ್ಳಿ ಕಂಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಲಹೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 17:25 IST
Last Updated 7 ಡಿಸೆಂಬರ್ 2018, 17:25 IST
ಶಿಕಾರಿಪುರದಲ್ಲಿ ಮಹಾರುದ್ರಾಭಿಷೇಕ ಕಾರ್ಯಕ್ರಮ ಪ್ರಯುಕ್ತ ನಡೆದ ಧರ್ಮಸಭೆಯ ನೇತೃತ್ವ ವಹಿಸಿದ್ದ ಸ್ವಾಮೀಜಿಗಳನ್ನು ಗ್ರಾಮದ ಮುಖಂಡರು ಸನ್ಮಾನಿಸಿದರು
ಶಿಕಾರಿಪುರದಲ್ಲಿ ಮಹಾರುದ್ರಾಭಿಷೇಕ ಕಾರ್ಯಕ್ರಮ ಪ್ರಯುಕ್ತ ನಡೆದ ಧರ್ಮಸಭೆಯ ನೇತೃತ್ವ ವಹಿಸಿದ್ದ ಸ್ವಾಮೀಜಿಗಳನ್ನು ಗ್ರಾಮದ ಮುಖಂಡರು ಸನ್ಮಾನಿಸಿದರು   

ಶಿಕಾರಿಪುರ: ಯುವ ಸಮುದಾಯ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು ಎಂದು ರಟ್ಟಿಹಳ್ಳಿ ಕಂಬಿಣಕಂತಿ ಮಠದ ಪೀಠಾಧ್ಯಕ್ಷ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಶುಕ್ರವಾರ ವೀರಭದ್ರೇಶ್ವರ ಸ್ವಾಮಿ 101ನೇ ಮಹಾರುದ್ರಾಭಿಷೇಕ ಕಾರ್ಯಕ್ರಮ ಪ್ರಯುಕ್ತ ನಡೆದ ಧರ್ಮಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಧರ್ಮ ಮಾರ್ಗದಲ್ಲಿ ಪ್ರತಿಯೊಬ್ಬರೂ ನಡೆಯಬೇಕು. ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ನೆಮ್ಮದಿ ನೀಡುತ್ತವೆ. ಧರ್ಮಸಭೆಯಲ್ಲಿ ನೀಡುವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಪೋಷಕರು ಮುಂದಾಗಬೇಕು. ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಶಿಕ್ಷಣ ಸಹಕಾರಿಯಾಗುತ್ತದೆ’ ಎಂದು ಸಲಹೆ ನೀಡಿದರು.

ADVERTISEMENT

ಕಾಳೇನಹಳ್ಳಿ ಶಿವಯೋಗಾಶ್ರಮದ ಪೀಠಾಧ್ಯಕ್ಷ ರೇವಣಸಿದ್ಧ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಅರುಂಧತಿ ರಾಜೇಶ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜಪ್ಪ, ಗೌರವಾಧ್ಯಕ್ಷ ಶಿವಪ್ಪ, ಅಧ್ಯಕ್ಷ ಚನ್ನಪ್ಪಯ್ಯ, ಮುಖಂಡರಾದ ಭೋಜರಾಜ್‌ ಪಾಟೀಲ್‌, ರಾಜೇಶ್‌, ಶಿವನಗೌಡ್ರು, ಷಣ್ಮುಖಪ್ಪ, ವಿಶ್ವನಾಥ್‌, ವೀರಪ್ಪಯ್ಯ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.