ADVERTISEMENT

ಶಿವಮೊಗ್ಗ | ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಅಪಘಾತ; ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 3:44 IST
Last Updated 4 ಜೂನ್ 2025, 3:44 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಶಿವಮೊಗ್ಗ: ಐಪಿಎಲ್ ಫೈನಲ್ ನಲ್ಲಿ ಆರ್‌ಸಿಬಿ ತಂಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಯುವಕ ಸಾವಿಗೀಡಾಗಿದ್ದಾನೆ.

ADVERTISEMENT

ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಮೃತ ಯುವಕ.

ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್‌ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕಾರಿಗೆ ಡಿಕ್ಕಿ ಹೊಡೆದು ಪರಾರಿ: ರಾತ್ರಿ ಸಂಭ್ರಮಾಚರಣೆ ವೇಳೆ ದುರ್ಗಿ ಗುಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಕಿಡಿಗೇಡಿಗಳು ಬೈಕ್ ನೊಂದಿಗೆ ಪರಾರಿಯಾಗಿದ್ದಾರೆ. ಕಾರಿಗೆ ಹಾನಿಯಾಗಿದೆ.

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಬೆಳಗಿನ ಜಾವದವರೆಗೂ ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆ ಮುಗಿಯದ ಕಾರಣ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.