ಆನಂದಪುರ: ರಾಷ್ಟ್ರೀಯ ಹೆದ್ದಾರಿ –69ರ ಮುಂಬಾಳು ಗ್ರಾಮದ ಮಸೀದಿ ಬಳಿ ಬಸ್ ಹಾಗೂ ಕಾರ್ ನಡುವೆ ಅಪಾಘಾತ ಸಂಭವಿಸಿದೆ.
ಶಿವಮೊಗ್ಗದಿಂದ ಸಾಗರದ ಕಡೆಗೆ ಹೊಗುತ್ತಿದ್ದ ಬಸ್ ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರ್ ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನ ಮುಂಭಾಗ ಬಹುತೇಕ ಜಖಂ ಆಗಿದ್ದು, ಕಾರಿನಲ್ಲಿ ಚಾಲಕ ಮಾತ್ರ ಪ್ರಯಾಣಿಸುತ್ತಿದ್ದ ಎಂದು ತಿಳಿದುಬಂದಿದ್ದು, ಏರ್ ಬ್ಯಾಗ್ ತೆರೆದ ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬಸ್ ಚಾಲಕ ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.