ಆನವಟ್ಟಿ: ಸಮೀಪದ ಲಕ್ಕವಳ್ಳಿ ಗ್ರಾಮದಲ್ಲಿ ಸೋಮವಾರ ಭತ್ತದ ಹೊಲಕ್ಕೆ ಔಷಧ ಸಿಂಪಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ.
ಎಂ.ಎಚ್. ಮಹೇಶ್ (27) ಮೃತಪಟ್ಟ ರೈತ. ಅವರು ಹೊಲಕ್ಕೆ ಔಷಧ ಸಿಂಪಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೇ ತುಳಿದಿದ್ದರಿಂದ ವಿದ್ಯುತ್ ತಗುಲಿದೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.