ಆನವಟ್ಟಿ: ಪಟ್ಟಣದಲ್ಲಿ ಮಂಗಳವಾರ ಗುಡುಗು ಸಹಿತ ಮಳೆ ಸುರಿದಿದ್ದು, ಅಡಿಕೆ, ಶುಂಠಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಬಿರುಸು ಮಳೆಯಿಂದ ರಸ್ತೆ ಮೇಲೆ ನೀರು ಹರಿಯಿತು. ಈ ವೇಳೆ ಪಟ್ಟಣದ ಸಂತೆ ಮಾರುಕಟ್ಟೆ ಬಳಿಯ ಮುಖ್ಯ ರಸ್ತೆಯ ಅಂಗಡಿಗಳ ಮುಂದೆ ಸಂಗ್ರಹಗೊಂಡು, ಅಂಗಡಿ ಒಳಗೆ ನುಗ್ಗುವ ಭೀತಿ ಎದುರಾಗಿತ್ತು.
ಅಂಗಡಿಗಳ ಮುಂದಿನ ಕಾಲುವೆ ಮುಚ್ಚಿ ಹೋಗಿದ್ದು, ಮಳೆ ನೀರು ಹರಿಯುತ್ತಿಲ್ಲ. ಪಟ್ಟಣ ಪಂಚಾಯಿತಿ ಅಥವಾ ಸಂಬಂಧಿಸಿದ ಇಲಾಖೆಯವರು ಕೂಡಲೇ ನೀರು ಹರಿಯುವಂತೆ ಕಾಲುವೆ ನಿರ್ಮಾಣ ಮಾಡಬೇಕು ಎಂದು ನಿವಾಸಿಗಳು ಹಾಗೂ ಅಂಗಡಿ ಮಾಲೀಕರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.