ADVERTISEMENT

ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವ ಅಪೇಕ್ಷೆ ನಮ್ಮದು: ಬಿಎಸ್‌ವೈ

-

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2024, 20:25 IST
Last Updated 4 ಡಿಸೆಂಬರ್ 2024, 20:25 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಶಿವಮೊಗ್ಗ: ‘ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು ಎಂಬುದು ನನ್ನ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಅಪೇಕ್ಷೆ. ಅದಕ್ಕೆ ಎಲ್ಲರೂ ಸಹಕರಿಸುತ್ತಾರೆ ಅಂದುಕೊಂಡಿದ್ದೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

‘ಬಸನಗೌಡ ಪಾಟೀಲ ಯತ್ನಾಳ ನಮ್ಮವರೆ. ಅವರೇನು ಹೊರಗಡೆಯವರಲ್ಲ. ಅವರು ಯಾವುದೋ ಕಾರಣಕ್ಕೆ ಆಕ್ರೋಶಗೊಂಡಿರಬಹುದು. ಏನೇ ತಪ್ಪು ಆಗಿದ್ದರೂ ಮುಖಾಮುಖಿ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಬೇಕು. ಎಲ್ಲವನ್ನೂ ಸರಿಪಡಿಸುವ ಕೆಲಸ ಮಾಡುತ್ತೇವೆ’ ಎಂದು ಬುಧವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ಮೈಸೂರಿನ ಮುಡಾದಲ್ಲಿ ಸಾವಿರಾರು ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಲಾಗಿದೆ. ಜಾರಿ ನಿರ್ದೇಶನಾಲಯದವರು (ಇ.ಡಿ) ಪುರಾವೆ ಇಲ್ಲದೇ ಮಾತನಾಡುವುದಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲೂ ವರದಿಯಾಗುತ್ತಿದೆ. ಒಮ್ಮೆ ತಪ್ಪು ಮಾಡಿದರೆ ಅದು ತಪ್ಪೇ. ನಿವೇಶನ ಮರಳಿಸುವುದು ಬಿಡುವುದು ಬೇರೆ ವಿಷಯ’ ಎಂದು ಮಾರ್ಮಿಕವಾಗಿ ನುಡಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.