
ಶಿವಮೊಗ್ಗ: ಹೊಸನಗರ ತಾಲ್ಲೂಕಿನ ನಿಟ್ಟೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತಡರಾತ್ರಿ ಮಾರ್ಗಮಧ್ಯೆ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾರಿಗೂ ಜೀವಪಾಯವಾಗಿಲ್ಲ. ಇಬ್ಬರು ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದೆ.
ಬೆಂಗಳೂರಿನ ಅನ್ನಪೂರ್ಣ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಸ್ಲೀಪರ್ ಬಸ್, ರಾತ್ರಿ ನಿಟ್ಟೂರಿನಿಂದ ಹೊರಟು ನಗರ, ಹೊಸನಗರ, ರಿಪ್ಪನ್ ಪೇಟೆ ಮೂಲಕ ಶಿವಮೊಗ್ಗದತ್ತ ಬರುವಾಗ ಅರಸಾಳು-ಸೂಡೂರು ಬಳಿ ಮಾರ್ಗದಲ್ಲಿ ಕಾಡಿನ ಮಧ್ಯೆ ಬೆಂಕಿ ಕಾಣಿಸಿಕೊಂಡಿದೆ.
ಬಸ್‌ನಲ್ಲಿ 40 ಮಂದಿ ಪ್ರಯಾಣಿಕರು ಇದ್ದರು. ಆರಂಭದಲ್ಲಿ ಬಸ್‌ನಲ್ಲಿ ತಾಂತ್ರಿಕ ದೋಷದಿಂದ ಹೊಗೆ ಕಾಣಿಸಿಕೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ನಂತರ ಬೆಂಕಿ ಹತ್ತಿಕೊಂಡಿದ್ದು, ತಕ್ಷಣ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ. ಹೀಗಾಗಿ ದೊಡ್ಡ ಅವಘಡ ತಪ್ಪಿದೆ ಎಂದು ತಿಳಿದುಬಂದಿದೆ. ಬಸ್ ಸಂಪೂರ್ಣ ಸುಟ್ಡು ಕರಕಲಾಗಿದೆ. ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಬಂದು ಬಸ್‌ನಲ್ಲಿದ್ದವರಿಗೆ ನೆರವಾಗಿದ್ದಾರೆ. ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.