ಶಿವಮೊಗ್ಗ: ಅತಿ ಹೆಚ್ಚು ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 7ರಂದು ಗುರುವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಸಾಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕಿನ ಶಾಲೆಗಳಿಗೆ ಮಾತ್ರ ಬುಧವಾರ ರಜೆ ಘೋಷಿಸಲಾಗಿತ್ತು. ಗುರುವಾರ ಬೆಳಿಗ್ಗೆ ಈ ಆದೇಶ ಮಾರ್ಪಡಿಸಿರುವ ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಅದನ್ನು ವಿಸ್ತರಿಸಿದ್ದಾರೆ.
ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಜಲಾಶಯದಿಂದ ನದಿಗೆ 45959 ಕ್ಯೂಸೆಕ್ ನೀರು ಹರಿಯಬಿಡಲಾಗಿದೆ. ಇದರಿಂದ ತುಂಗೆ ಭೋರ್ಗರೆಯುತ್ತಿದ್ದಾಳೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.