
ಪ್ರಜಾವಾಣಿ ವಾರ್ತೆವರ್ಗಾವಣೆ
ಶಿವಮೊಗ್ಗ: ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಂಜುನಾಥ ನಾಯಕ್ ಅವರಿಗೆ ಬೆಳಗಾವಿಗೆ ವರ್ಗಾವಣೆಯಾಗಿದೆ.
ಮಂಜುನಾಥ್ ನಾಯಕ್ 2023ರ ಜೂನ್ ತಿಂಗಳಿಂದ ಶಿವಮೊಗ್ಗ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದರು.
ಶಿವಮೊಗ್ಗದಲ್ಲಿ ತಮ್ಮ ಸೇವಾ ಅವಧಿಯಲ್ಲಿ ಮಂಜುನಾಥ ನಸಯಕ್ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿದ್ದರು. ಇದರಿಂದ ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದ ಒಟ್ಟು 1,21,499 ಪ್ರಕರಣ ರಾಜಿ ಸಂಧಾನದ ಮೂಲಕ ಅಂತಿಮವಾಗಿ ವಿಲೇವಾರಿ ಮಾಡಲು ಸಾಧ್ಯವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.