ADVERTISEMENT

ಮಕ್ಕಳ ಹಕ್ಕುಗಳ ರಕ್ಷಣೆ: ಶಿವಮೊಗ್ಗ ಜಿಲ್ಲೆಗೆ ಅಗ್ರಸ್ಥಾನ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 3:18 IST
Last Updated 2 ಫೆಬ್ರುವರಿ 2026, 3:18 IST
   

ಶಿವಮೊಗ್ಗ: ‘ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರಸ್ಥಾನ ಪಡೆದಿದೆ. ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಶ್ಲಾಘಿಸಿದರು.

ನಗರದ ಜಿಲ್ಲಾ ಡಯಟ್ ಸಂಸ್ಥೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಾಲ್ಯ ವಿವಾಹ, ಪೋಕ್ಸೊ ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಅರಿವು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆ, ಮೂಲ ಸೌಕರ್ಯಗಳ ಕುರಿತಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿ ಮಗುವಿಗೆ ಸಮಾಜದಲ್ಲಿ ಪಾಲನೆ ಪೋಷಣೆ ಸಿಗಬೇಕು. ದೊರಕದಿದ್ದಾಗ ಅದು ಕಾನೂನಿನ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಪಾಲನೆ ಪೋಷಣೆ ಸರಿಯಾಗಿ ಮಾಡಿ, ಈ ಮಕ್ಕಳು ಮುಖ್ಯವಾಹಿನಿಗೆ ಬರುವಂತೆ ಪಾಲನಾ ಸಂಸ್ಥೆಗಳು ಮಾಡಬೇಕು’ ಎಂದರು. 

‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳ ಮಾತನಾಡಿ,  ಅಧಿಕಾರಿಗಳು ಬಾಲ್ಯ ವಿವಾಹ, ಪೋಕ್ಸೊ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಸಂಪೂರ್ಣ  ತಿಳಿದುಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು’ ಎಂದರು.
 
ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾಧಿಕಾರಿ ಆರ್.ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಡಯಟ್ ಪ್ರಾಂಶುಪಾಲ ಎಚ್.ಆರ್. ಕೃಷ್ಣಮೂರ್ತಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.