ಶಿವಮೊಗ್ಗ : ಇಲ್ಲಿನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ (ಡಿಸಿಸಿ ಬ್ಯಾಂಕ್) 2014ರಲ್ಲಿ ನಕಲಿ ಬಂಗಾರ ಅಡಮಾನ ಇಟ್ಟು ₹62.77 ಕೋಟಿ ಸಾಲ ಪಡೆದು ವಂಚಿಸಿದ್ದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಎರಡನೇ ದಿನವು ಜಿಲ್ಲೆಯ ವಿವಿಧೆಡೆ ದಾಳಿ ಮುಂದುವರೆಸಿದ್ದಾರೆ.
ಶಿವಮೊಗ್ಗ, ತೀರ್ಥಹಳ್ಳಿಯ ಕೆಲವೆಡೆ ಬುಧವಾರ ಇಡಿ ಅಧಿಕಾರಿಗಳಿಂದ ದಾಳಿ ನಡೆದಿದೆ.
ಶಿವಮೊಗ್ಗದ ಅಚ್ಚುತರಾವ್ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎನ್.ಸುಧೀರ್ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣ ನಡೆದಾಗಲೂ ಸುಧೀರ್ ನಿರ್ದೇಶಕರಾಗಿದ್ದರು.
ಇನ್ನೊಂದೆಡೆ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಕೃಷ್ಣಮೂರ್ತಿ ಭಟ್ ಮನೆ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಸುಧೀರ್ ಹಾಗೂ ಕೃಷ್ಣಮೂರ್ತಿ ಭಟ್ ಇಬ್ಬರೂ ಹಾಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.