ಶಿವಮೊಗ್ಗ: ಮನೆಗೆ ನುಗ್ಗಿ ಮಹಿಳೆಯನ್ನು ಬೆದರಿಸಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ಇಲ್ಲಿನ ಕೋಟೆ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಭದ್ರಾವತಿಯ ಹೊಸಮನೆಯ ಭೋವಿ ಕಾಲೊನಿ ನಾಲ್ಕನೇ ಕ್ರಾಸ್ ನಿವಾಸಿ ವಸಂತರಾಜ್ (40) ಬಂಧಿತ ವ್ಯಕ್ತಿ.
ಕಳವು ಮಾಡಿದ್ದ ₹4.5 ಲಕ್ಷ ಮೌಲ್ಯದ 46 ಗ್ರಾಂ ಚಿನ್ನದ ಸರ, ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ್ದ ಬೈಕ್ ಸೇರಿದಂತೆ ಒಟ್ಟು ₹5 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಆರೋಪಿಯಿಂದ ವಶಪಡಿಸಿಕೊಂಡಿದ್ದಾರೆ.
ಗಣಪತಿ ಲೇಔಟ್‌ನ ಎರಡನೇ ಕ್ರಾಸ್ ನಿವಾಸಿ ಜಿ.ನಾಗರಾಜ (85) ಅವರು ಜುಲೈ 3 ರಂದು ಕೋಟೆ ಪೊಲೀಸ್ ಠಾಣೆಗೆ ತೆರಳಿ, ತಮ್ಮ ಪತ್ನಿ ಒಬ್ಬರೇ ಇದ್ದಾಗ ಮನೆಯೊಳಗೆ ನುಗ್ಗಿ ಚಿನ್ನದ ಆಭರಣ ಸುಲಿಗೆ ಮಾಡಿಕೊಂಡು ಹೋಗಿದ್ದಾರೆ’ ಎಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿದ್ದ ಇನ್‌ಸ್ಪೆಕ್ಟರ್ ಹರೀಶ್ ಕೆ.ಪಟೇಲ್, ಪಿಎಸ್‌ಐ ಸಂತೋಷ್ ಕುಮಾರ್ ಬಾಗೋಜಿ ಹಾಗೂ ಸಿಬ್ಬಂದಿ ತನಿಖೆ ನಡೆಸಿ ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ಹಾಗೂ ವಸ್ತುಗಳ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.