
ಪ್ರಾತಿನಿಧಿಕ ಪತ್ರ
ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಆ‍್ಯಂಡ್ ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಫೆ. 2ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಬಿ.ಎಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-222382ಗೆ ಸಂಪರ್ಕಿಸುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.