ಶಿವಮೊಗ್ಗ: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬನ ಜೇಬಿನಲ್ಲಿ ಸಿಮ್ ಕಾರ್ಡ್ ಹಾಗೂ ತಗಡಿನಿಂದ ಮಾಡಿದ ವಸ್ತು ಪತ್ತೆಯಾಗಿದೆ.
ಕೈದಿ ಉಮೈದ್ ಎಂಬಾತನನ್ನು ಪುತ್ತೂರಿನ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಜೈಲಿನ ಆ್ಯಕ್ಸಸ್ ಕಂಟ್ರೋಲ್‌ನಲ್ಲಿ ತಪಾಸಣೆ ನಡೆಸುವಾಗ ವಸ್ತುಗಳು ಪತ್ತೆಯಾಗಿವೆ.
ಶುಕ್ರವಾರ ಕೈದಿ ದೌಲತ್ ಖಾನ್ ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲ ಮತ್ತು ಮೂರು ಇಂಚು ಉದ್ದದ ಕೀ ಪ್ಯಾಡ್ ಮೊಬೈಲ್ ಫೋನ್ ದೊರೆತಿತ್ತು. ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಅದನ್ನು ಹೊರ ತೆಗೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.