ಶಿವಮೊಗ್ಗ: ಸಮೀಪದ ಆಯನೂರು ಹಾಗೂ ಕುಂಸಿ ವ್ಯಾಪ್ತಿಯ 8 ಅಂಗನವಾಡಿ ಕೇಂದ್ರಗಳು ಹಾಗೂ ಒಂದು ಸರ್ಕಾರಿ ಪ್ರಾಥಮಿಕ ಶಾಲೆಗೆ ಸೋಮವಾರ ಇಲ್ಲಿನ ಲೋಕಾಯುಕ್ತ ಪೊಲೀಸರ ಎರಡು ತಂಡ ಭೇಟಿ ನೀಡಿ ತಪಾಸಣೆ ನಡೆಸಿತು.
ಲೋಕಾಯುಕ್ತ ಪೊಲೀಸ್ ಠಾಣೆಯ ಡಿವೈಎಸ್‌ಪಿ ಬಿ.ಪಿ.ಚಂದ್ರಶೇಖರ್ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ವೀರಬಸಪ್ಪ ಎಲ್. ಕುಸಲಾಪುರ ನೇತೃತ್ವ ಹಾಗೂ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಚ್.ಮಂಜುನಾಥ ಚೌದರಿ ಅವರ ಮಾರ್ಗದರ್ಶನದಲ್ಲಿ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸಿದರು.
ಅಂಗನವಾಡಿಗಳ ದಾಸ್ತಾನು ಕೊಠಡಿಯ ಸ್ವಚ್ಛತೆ, ಆಹಾರದ ಪ್ಯಾಕೇಟ್ ಮೇಲೆ ಉತ್ಪಾದನಾ ದಿನಾಂಕ ಮತ್ತು ಅವಧಿ ಮೀರಿದ ದಿನಾಂಕ ನಮೂದು ಮಾಡದೇ ಇರುವುದು ಕಂಡುಬಂದಿದೆ. ಅಂಗನವಾಡಿ ಕೇಂದ್ರ ಶಿಥಿಲಾವಸ್ಥೆಯಲ್ಲಿ ಇರುವುದು, ದಾಖಲಾತಿಗಳನ್ನು ಸರಿಯಾಗಿ ನಿರ್ವಹಿಸದಿರುವುದು ಕಂಡು ಬಂದಿದೆ.
ಕೊಹಳ್ಳಿ ಪೇಟೆ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಅವಧಿ ಮೀರಿದ ರಾಗಿ ಹಿಟ್ಟನ್ನು ಬಳಸುತ್ತಿರುವುದು ಕಂಡುಬಂದಿದ್ದು, ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಸಲು ಒಂದು ವಾರದೊಳಗೆ ಕೈಗೊಂಡ ಕ್ರಮದ ಬಗ್ಗೆ ಪಾಲನಾ ವರದಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.