ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಯಶಸ್ವಿಯಾಗಿ ನಡೆದಿದೆ. ಇದಕ್ಕಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು. ನಗರದಲ್ಲಿ ಸೆ.22ರಂದು ಈದ್‌ಮಿಲಾದ್ ಮೆರವಣಿಗೆ ಇದೆ. ಅದು ಕೂಡ ಶಾಂತಿಯುತವಾಗಿ ನಡೆಯಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆಶಿಸಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಮಾಜದ ಮುಖಂಡರು, ಸಂಘ ಸಂಸ್ಥೆಗಳು ಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ಒಂದು ಪರಂಪರೆಯೇ ವಿಜೃಂಭಿಸಿದೆ. ಮುಂಜಾನೆ 4.16ಕ್ಕೆ ಭೀಮನಮಡುವಿನಲ್ಲಿ ಗಣಪತಿ ವಿಸರ್ಜನೆ ನಡೆಯಿತು ಎಂದರು.
ಮುಖ್ಯವಾಗಿ ಪಕ್ಷಬೇಧ ಮರೆತು ಈ ಉತ್ಸವದಲ್ಲಿ ಎಲ್ಲರೂ ಪಾಲ್ಗೊಂಡಿದ್ದರು. ಜಿಲ್ಲಾಡಳಿತ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮೋಹನ್‌ರೆಡ್ಡಿ, ಎನ್.ಜೆ.ನಾಗರಾಜ್, ಜ್ಞಾನೇಶ್ವರ್, ದೀನದಯಾಳ್, ಮುರುಳಿ, ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.