ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ವಿವಾಹ:19 ವರ್ಷದ ಯುವಕನಿಗೆ 20 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2025, 2:31 IST
Last Updated 27 ಸೆಪ್ಟೆಂಬರ್ 2025, 2:31 IST
   

ಭದ್ರಾವತಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆಕೆಯನ್ನು ವಿವಾಹವಾಗಿದ್ದ 19 ವರ್ಷದ ಯುವಕನಿಗೆ ಇಲ್ಲಿನ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2022ರಲ್ಲಿ ತಾಲ್ಲೂಕಿನ ಗ್ರಾಮವೊಂದರ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಆಕೆಯನ್ನು ಮದುವೆಯಾಗಿದ್ದ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ಬಾಲಕಿ ದೂರು ನೀಡಿದ್ದಳು. ತನಿಖೆ ನಡೆಸಿದ್ದ ಅಂದಿನ ಪೊಲೀಸ್ ಅಧಿಕಾರಿ ಅಭಯ ಪ್ರಕಾಶ್ ಸೋಮನಾಳ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಶಿವಮೊಗ್ಗದ ಎಫ್‌ಟಿಎಸ್‌ಸಿ-1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಭ.ಪಾಟೀಲರವರು ಆರೋಪಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷ ಜೈಲು ಶಿಕ್ಷೆ ₹ 80 ಸಾವಿರ ದಂಡ ವಿಧಿಸಿದ್ದಾರೆ. ಈ ಮೊತ್ತವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ಒದಗಿಸುವಂತೆ ಆದೇಶಿಸಿದ್ದಾರೆ.

ADVERTISEMENT

ಸರ್ಕಾರದ ಪರವಾಗಿ ವಕೀಲ ಎಚ್.ಆರ್.ಶ್ರೀಧರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.