ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಸೋಮವಾರ ಇಲ್ಲಿನ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿ ಸ್ವೀಕರಿಸಿದರು.
ಜಿಲ್ಲಾ ತೆಲುಗು ಅರುಂಧತಿ ಆದಿ ಕರ್ನಾಟಕ ಸಮಾಜದವರು ನಗರದ 27ನೇ ವಾರ್ಡ್‌ನಲ್ಲಿ ಅರ್ಧಕ್ಕೆ ನಿಂತಿರುವ ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ₹ 50 ಲಕ್ಷ ಅನುದಾನ ಮಂಜೂರು ಮಾಡಬೇಕೆಂದು ಕೋರಿದರು.
ಶಿವಮೊಗ್ಗ– ಭದ್ರಾವತಿ ಮೀಟರ್ ಟ್ಯಾಕ್ಸಿ ಅಸೋಸಿಯೇಷನ್‌ನವರು ತಮ್ಮ ಟ್ಯಾಕ್ಸಿಗಳಿಗೆ ಜಿಪಿಎಸ್ ಮತ್ತು ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಕೆ ಮಾಡಬೇಕೆಂಬ ಸರ್ಕಾರದ ಆದೇಶವನ್ನು ರದ್ದುಪಡಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.
ಪ್ರಿಯಾಂಕ ಬಡಾವಣೆ ನಿವಾಸಿಗಳ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರಿಯಾಂಕ ಬಡಾವಣೆಯಲ್ಲಿ ಉದ್ದ ಮತ್ತು ಅಡ್ಡ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.
ಬನಶಂಕರಿ ಬಡಾವಣೆಯ ಆಂಜನೇಯ ಸಮಿತಿಯಿಂದ ದೇವಸ್ಥಾನ ನಿರ್ಮಿಸಲು ಅನುದಾನ ನೀಡುವಂತೆ ಕೋರಿದರು. ಹಾಗೂ ಉದ್ಯೋಗ ಒದಗಿಸುವಂತೆ ಕೋರಿ ಇಬ್ಬರು ಮಹಿಳೆಯರು ಅರ್ಜಿ ನೀಡಿದರು. ಸಚಿವರು 10 ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಿ, ಸ್ಪಂದಿಸುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.