ಸಾಂಕೇತಿಕ ಚಿತ್ರ
ಶಿರಾಳಕೊಪ್ಪ: ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಮೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಇತ್ತೀಚಿಗೆ ಪತ್ತೆ ಹಚ್ಚಲಾಗಿದ್ದ ಗಾಂಜಾ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆಡಿಯೊ ಹಾಗೂ ವಿಡಿಯೊ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ರಮೇಶ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ಒಂದು ತಿಂಗಳಿನಿಂದ ಸಬ್ ಇನ್‌ಸ್ಪೆಕ್ಟರ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಸದಸ್ಯರು ವಿವಿಧ ಆರೋಪ ಮಾಡಿ, ಪ್ರತಿಭಟನೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.