ತೀರ್ಥಹಳ್ಳಿ: ಬೇಗುವಳ್ಳಿ ಕೆರೆ ಸಮೀಪ ಕಾರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ, ಕಾಸರಗೋಡು ಮೂಲದ ಅಪ್ಸಾಬಿ (58) ಮೃತರು.
ಕಾಸರಗೋಡಿನಿಂದ ಶಿವಮೊಗ್ಗಕ್ಕೆ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗ ಮಧ್ಯೆ ಲಾರಿ – ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ ನಾಲ್ವರಿಗೆ ತೀವ್ರ ಪೆಟ್ಟಾಗಿದೆ. ಆಂಬುಲೆನ್ಸ್ ಬರುವುದು ತಡವಾಗಿದ್ದರಿಂದ ಸ್ಥಳೀಯರೇ ವಾಹನಗಳ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.