ADVERTISEMENT

ಶಿವಮೊಗ್ಗದ ಪಿಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಶಾಹಿದ್ ಖಾನ್‌ ಬಂಧನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 7:44 IST
Last Updated 22 ಸೆಪ್ಟೆಂಬರ್ 2022, 7:44 IST
ಶಾಹಿದ್ ಖಾನ್
ಶಾಹಿದ್ ಖಾನ್   

ಶಿವಮೊಗ್ಗ: ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಶಾಹಿದ್ ಖಾನ್ ಅವರನ್ನು ಗುರುವಾರ ಬೆಳಗಿನ ಜಾವ ಬಂಧಿಸಿ ಕರೆದೊಯ್ದಿದ್ದಾರೆ.

ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಭಯೋತ್ಪಾದನೆ ನಿಗ್ರಹ ದಳ (ಎಟಿಸಿ) ದಾಖಲಿಸಿದ್ದ ಪ್ರಕರಣದ ಸಂಬಂಧ ಶಾಹಿದ್ ಖಾನ್ ಬಂಧನವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇಲ್ಲಿನ ಲಷ್ಕರ್ ಮೊಹಲ್ಲಾದಲ್ಲಿರುವ ಶಾಹಿದ್ ಖಾನ್ ಮನೆಗೆ ಬಂದ ಬೆಂಗಳೂರು ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ಕರೆದೊಯ್ದಿತು. ಸ್ಥಳೀಯ ಪೊಲೀಸರು ಈ ಕಾರ್ಯಾಚರಣೆಗೆ ನೆರವಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.