ADVERTISEMENT

ಶಾರ್ಟ್ ಸರ್ಕೀಟ್‌: ಬೇಕರಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 16:40 IST
Last Updated 27 ನವೆಂಬರ್ 2020, 16:40 IST

ತೀರ್ಥಹಳ್ಳಿ: ಪಟ್ಟಣದಲ್ಲಿಶುಕ್ರವಾರ ಬೆಳಗಿನ ಜಾವ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಫ್ರಿಜ್‌ ಸ್ಫೋಟಗೊಂಡು ಬೇಕರಿ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಆಗುಂಬೆ ರಸ್ತೆ ಮಾರ್ಗದ ಕಾಮತ್ ಬೇಕರಿಯಲ್ಲಿ ಅನಾಹುತ ಸಂಭವಿಸಿದ್ದು, ಅಪಾರ ಹಾನಿಯಾಗಿದೆ. ವಿದ್ಯುತ್ ಪೂರೈಕೆಯಲ್ಲಿ ಉಂಟಾಗಿರುವ ದೋಷ ಘಟನೆಗೆ ಕಾರಣವಾಗಿರಬಹುದು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಬೇಕರಿಯಲ್ಲಿನ ಪೀಠೋಪಕರಣ, ತಿಂಡಿ, ದಿನಸಿ ಸಾಮಗ್ರಿ, ಅಡುಗೆ ಅನಿಲ, ಸಿಲಿಂಡರ್ ಸುಟ್ಟುಹೋಗಿವೆ. ಸ್ಫೋಟದ ತೀವ್ರತೆಗೆ ಗೋಡೆ ಬಿರುಕು ಬಿಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT