ADVERTISEMENT

ಶಿವಮೊಗ್ಗ: ಗುಂಪು ಹಲ್ಲೆಯಿಂದ ಹತ್ಯೆಯಾದ ಬಾಲಕನ ಕುಟುಂಬಕ್ಕೆ ₹15 ಲಕ್ಷ ಪರಿಹಾರ

ವಿಮಾನ ನಿಲ್ದಾಣಕ್ಕೆ ಬಾಲಕನ ಪಾಲಕರನ್ನು ಕರೆಸಿಕೊಂಡು ಸಾಂತ್ವನ ಹೇಳಿದ ಸಿಎಂ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 21:49 IST
Last Updated 1 ಮಾರ್ಚ್ 2026, 21:49 IST
ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಸಂಕೇತ್ ತಂದೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರದ ಚೆಕ್‌ ವಿತರಿಸಿದರು 
ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಸಂಕೇತ್ ತಂದೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರದ ಚೆಕ್‌ ವಿತರಿಸಿದರು    

ಶಿವಮೊಗ್ಗ: ಇಲ್ಲಿನ ಊರಗಡೂರಿನಲ್ಲಿ ಈಚೆಗೆ ಬಾಲಕರು ನಡೆಸಿದ ಗುಂಪು ಹಲ್ಲೆಯಿಂದ ಹತ್ಯೆಗೀಡಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನ ಪಾಲಕರನ್ನು ಭಾನುವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನ ಹೇಳಿದರು.

ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ತೆರಳಲು ನಿಲ್ದಾಣಕ್ಕೆ ಬಂದಿದ್ದ ಅವರು, ರಾಜ್ಯ ಸರ್ಕಾರದಿಂದ ₹10 ಲಕ್ಷ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ‍್ಪ ಅವರು ವೈಯಕ್ತಿಕವಾಗಿ ಕೊಟ್ಟ ₹ 5 ಲಕ್ಷ ಪರಿಹಾರ ಮೊತ್ತದ ಚೆಕ್‌ ಅನ್ನು ಸಂಕೇತ್ ತಂದೆ ಶಿವಕುಮಾರ್‌ಗೆ ವಿತರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.