ADVERTISEMENT

ಸಿಗಂದೂರು ಸೇತುವೆ ಜುಲೈ 14ಕ್ಕೆ ಲೋಕಾರ್ಪಣೆ: ಬಿ.ವೈ.ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 5 ಜುಲೈ 2025, 23:02 IST
Last Updated 5 ಜುಲೈ 2025, 23:02 IST
<div class="paragraphs"><p>ಬಿ.ವೈ.ರಾಘವೇಂದ್ರ</p></div>

ಬಿ.ವೈ.ರಾಘವೇಂದ್ರ

   

ಶಿವಮೊಗ್ಗ: ಸಾಗರ ತಾಲ್ಲೂಕಿನ ಅಂಬಾರಗೋಡ್ಲು- ಕಳಸವಳ್ಳಿ ನಡುವೆ ನಿರ್ಮಿಸಲಾಗಿರುವ ತೂಗು ಸೇತುವೆಯನ್ನು ಕೇಂದ್ರದ  ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜುಲೈ 14ರಂದು ಲೋಕಾರ್ಪಣೆ ಮಾಡಲಿದ್ದಾರೆ.

ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ, ₹ 473 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ, 2.44 ಕಿ.ಮೀ ಉದ್ದದ ಈ ಸೇತುವೆಯು ಗುಜರಾತಿನ ಓಖಾ ನಂತರ ದೇಶದಲ್ಲಿಯೇ ಎರಡನೇ ಅತಿ ದೊಡ್ಡ ತೂಗು ಸೇತುವೆ ಆಗಿದೆ. ಉದ್ಘಾಟನೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹ ಪಾಲ್ಗೊಳ್ಳಲಿದ್ದಾರೆ ಎಂದರು.

ADVERTISEMENT

ಮಲೆನಾಡಿನ ಪ್ರಮುಖ ಯಾತ್ರಾ ಸ್ಥಳ ಸಿಗಂದೂರಿಗೆ ಈ ಸೇತುವೆ ಸಂಪರ್ಕ ಕಲ್ಪಿಸುವ ಕಾರಣಕ್ಕೆ ‘ಸಿಗಂದೂರು ಶ್ರೀ ಚೌಡೇಶ್ವರಿ ಸೇತುವೆ’ ಎಂದು ನಾಮಕರಣ ಮಾಡಲು ಮಲೆನಾಡು ಭಾಗದ ಬಿಜೆಪಿ ಮುಖಂಡರು ಸೇರಿ ನಿರ್ಧರಿಸಿದ್ದೇವೆ. ಆ ಬಗ್ಗೆ ಎನ್‌ಒಸಿ ಕೊಟ್ಟು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಿ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.