ADVERTISEMENT

ದೇಶದ ಧಾರ್ಮಿಕ ಕ್ಷೇತ್ರಕ್ಕೆ ಮಹತ್ವ: ಸಂಸದ ಬಿ.ವೈ. ರಾಘವೇಂದ್ರ

ಧಾರ್ಮಿಕ ದಿನಾಚರಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 2:56 IST
Last Updated 4 ಏಪ್ರಿಲ್ 2022, 2:56 IST
ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮುಜರಾಯಿ ಇಲಾಖೆ ಶನಿವಾರ ಆಯೋಜಿಸಿದ್ದ ಧಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.
ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮುಜರಾಯಿ ಇಲಾಖೆ ಶನಿವಾರ ಆಯೋಜಿಸಿದ್ದ ಧಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.   

ಶಿಕಾರಿಪುರ: ‘ಜಗತ್ತಿನಲ್ಲಿಯೇ ನಮ್ಮ ದೇಶ ಧಾರ್ಮಿಕ ಕ್ಷೇತ್ರಗಳಿಂದಾಗಿ ಮಹತ್ವ ಪಡೆದಿದೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮುಜರಾಯಿ ಇಲಾಖೆ ಶನಿವಾರ ಆಯೋಜಿಸಿದ್ದ ಧಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಹಿಂದೂ ಧರ್ಮದ ಪ್ರಕಾರ ಯುಗಾದಿ ಹೊಸ ವರ್ಷವಾಗಿದ್ದು, ಈ ದಿನವನ್ನು ರಾಜ್ಯ ಸರ್ಕಾರ ಧಾರ್ಮಿಕ ದಿನವನ್ನಾಗಿ ಆಚರಿಸುತ್ತಿರುವುದು ಸಂತಸದ ಸಂಗತಿ’ ಎಂದರು.

ADVERTISEMENT

‘ಕೋವಿಡ್ ಕಾರಣ ಎರಡು ವರ್ಷಗಳಿಂದ ಹುಚ್ಚರಾಯಸ್ವಾಮಿ ದೇವರ ಬ್ರಹ್ಮರಥೋತ್ಸವವನ್ನು ವಿಜೃಂಭ
ಣೆಯಿಂದ ಆಚರಿಸಲು ಸಾಧ್ಯವಾಗಿರಲಿಲ್ಲ. ಏ.16ರಂದು ನಡೆಯುವ ಬ್ರಹ್ಮರಥೋತ್ಸವವನ್ನು ವಿಜೃಂಭಣೆ
ಯಿಂದ ಆಚರಿಸೋಣ’ ಎಂದರು.

ಸ್ಥಳೀಯ ಕಲಾವಿದರಿಂದ ಭಜನೆ, ಭಕ್ತಿಗೀತೆಗಳ ಗಾಯನ, ಭರತನಾಟ್ಯ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಋಗ್ವೇದ ಟ್ರಸ್ಟ್ ಪದಾಧಿಕಾರಿಗಳು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು.

ಸಂಸದ ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ,ವಿವಿಧ ನಿಗಮ ಮಂಡಳಿ ನಿರ್ದೆಶಕರಾದ ಭದ್ರಾಪುರ ಹಾಲಪ್ಪ, ಕಬಾಡಿ ರಾಜಣ್ಣ, ಜೆ. ಸುಕೇಂದ್ರಪ್ಪ, ಹೊಸೂರು ರುದ್ರೇಶ್, ಗಾಯತ್ರಿದೇವಿ, ತಹಶೀಲ್ದಾರ್ ಎಂ.ಪಿ. ಕವಿರಾಜ್, ಉಪತಹಶೀಲ್ದಾರ್ ಮಂಜುನಾಥ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಾಸ್ವಾಮಿ, ಮುಖ್ಯಾಧಿಕಾರಿ ಸುರೇಶ್, ಸದಸ್ಯರಾದ ಟಿ.ಎಸ್. ಮೋಹನ್, ಗುರುರಾಜ್ ಜಗತಾಪ್, ಬೆಣ್ಣೆದೇವೇಂದ್ರ, ರೂಪಕಲಾ ಹೆಗಡೆ, ರೂಪ ಮಂಜುನಾಥ್, ದರ್ಶನ್‌, ಅಖಿಲ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ಎನ್.ವಿ.ಈರೇಶ್, ಜಿಲ್ಲಾ ನಿರ್ದೇಶಕ ಕೊಟ್ರೇಶಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.