ಶಿವಮೊಗ್ಗ: ನಗರದ ಬಿ.ಎಚ್. ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಸಭಾಂಗಣದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸಿಲ್ಕ್ ಇಂಡಿಯಾ-2025 ವಿವಿಧ ರಾಜ್ಯಗಳ ಪರಿಶುದ್ಧ ರೇಷ್ಮೆ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಜುಲೈ 11 ರಿಂದ 20ರವರೆಗೆ ಆಯೋಜಿಸಿದ್ದು, ಇದಕ್ಕೆ ಕೊನೆಯ ಐದು ದಿನಗಳು ಮಾತ್ರ ಬಾಕಿ ಇದೆ.
ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರದವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 70ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಶಿವಮೊಗ್ಗದ ಜನತೆಯ ಮುಂದೆ ಪ್ರತಿದಿನ ಬೆಳಿಗ್ಗೆ 10.30 ರಿಂದ ರಾತ್ರಿ 8.30ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು.
ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆ, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆ, ಅರಿಣಿ ರೇಷ್ಮೆ ಸೀರೆ, ಧರ್ಮಾವರಂ ಸೀರೆ, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆ, ರಾ ಸಿಲ್ಕ್ ಮತ್ತು ಕೋಸಾ ಸೀರೆ, ಕೋಲ್ಕತ್ತ ಗಣಪತಿ ಸೀರೆ, ಢಾಕ ಸೀರೆ, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆ, ಪ್ರಿಂಟೆಡ್ ಸೀರೆ, ಪಶ್ಮೀನಾ ಸೀರೆ, ಡಿಸೈನರ್ ಡ್ರೆಸ್ ಮೇಟಿರಿಯಲ್ಸ್, ಬಾಗಲ್‌ಪುರ್ ರೇಷ್ಮೆ ಸೀರೆ, ಶಿಫಾನ್ ಸೀರೆ, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆ ಸೇರಿದಂತೆ ಅನೇಕ ಮಾದರಿಯ ರೇಷ್ಮೆ ಸೀರೆಗಳು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡಲಾಗುವುದು.
ಈ ವಸ್ತುಗಳನ್ನು ಉತ್ವಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ಅತ್ಯಾಕರ್ಷಕ ಬೆಲೆಯಲ್ಲಿ ಸೀರೆಗಳು ದೊರಕುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.