ADVERTISEMENT

ಮೆಗ್ಗಾನ್ ಆಸ್ಪತ್ರೆಯ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 12:32 IST
Last Updated 18 ಜೂನ್ 2020, 12:32 IST
ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆ ಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.   

ಶಿವಮೊಗ್ಗ: ಮೆಗ್ಗಾನ್ ಬೋಧನಾ ಆಸ್ಪತ್ರೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನುನಿಗದಿತ ಅವಧಿಯ ಒಳಗೆಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.

ಮೆಗ್ಗಾನ್ ಬೋಧನಾ ಆಸ್ಪತ್ರೆಸಭಾಂಗಣದಲ್ಲಿ ಗುರುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರುಮಾತನಾಡಿದರು.

ರೋಗಿಗಳಿಗೆ ಹೊರಗಿನಿಂದ ಔಷಧ ತರಿಸಲು ಚೀಟಿ ಕೊಡಬಾರದು. ಒಂದು ವೇಳೆ ಅನಿವಾರ್ಯವಾಗಿ ಚೀಟಿ ಬರೆದರೂ ಬಿಪಿಎಲ್ ಕಾರ್ಡುದಾರರಿಗೆ ಆ ಮೊತ್ತ ಪುನರ್ ಪಾವತಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಇರುವ ರೀತಿ ವೈದ್ಯರ ಹೆಸರು, ಸಮಯ ಇತ್ಯಾದಿಗಳ ವಿವರಗಳು ಎಲ್‍ಇಡಿ ಪರದೆಯಲ್ಲಿ ಅಳವಡಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

₨ 1.21 ಕೋಟಿ ವೆಚ್ಚದಲ್ಲಿ13 ಪ್ರಯೋಗಾಲಯಗಳನ್ನು ನವೀಕರಿಸಲಾಗಿದೆ. ಐದು ಪ್ರಯೋಗಾಲಯಗಳ ನವೀಕರಣ ಕಾರ್ಯ ಪೂರ್ಣಗೊಂಡಿದೆ. ₨ 1.90 ಕೋಟಿ ವೆಚ್ಚದಲ್ಲಿ ಶರಾವತಿ ಬ್ಲಾಕ್ ಕಟ್ಟಡ ನವೀಕರಣ, ₨ 1.65 ಕೋಟಿ ವೆಚ್ಚದಲ್ಲಿ 3 ಬೋಧನಾ ಕೊಠಡಿ, ₨ 4.5 ಕೋಟಿ ವೆಚ್ಚದಲ್ಲಿ ಕ್ಯಾಥ್‍ಲ್ಯಾಬ್‍ಗೆ ಉಪಕರಣ ಖರೀದಿಸಲು ಟೆಂಡರ್ಕರೆಯಲಾಗಿದೆ. ₨5.32 ಕೋಟಿ ವೆಚ್ಚದಲ್ಲಿ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ಕಾಮಗಾರಿನಡೆಯುತ್ತಿವೆ.₨ 2.16 ಕೋಟಿವೆಚ್ಚದಲ್ಲಿ ಹೈಟೆಕ್ ಮರಣೋತ್ತರ ಪರೀಕ್ಷಾ ಕೇಂದ್ರ, ಉಪಕರಣ ಮತ್ತುಆಮ್ಲಜನಕಘಟಕ ನಿರ್ಮಾಣ, ₨ 21.50 ಕೋಟಿ ವೆಚ್ಚದಲ್ಲಿ ಎಂಸಿಎಚ್ ಬ್ಲಾಕ್ ನಿರ್ಮಾಣ ₨ 12.49 ಕೋಟಿ ವೆಚ್ಚದಲ್ಲಿ ಉಪಕರಣ ಖರೀದಿಗೆ ಪ್ರಕ್ರಿಯೆ ನಡೆಸಲಾಗಿದೆ ಎಂದುವೈದ್ಯಕೀಯ ಕಾಲೇಜು ಆಡಳಿತಾಧಿಕಾರಿ ಶಿವಕುಮಾರ್ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒಎಂ.ಎಲ್.ವೈಶಾಲಿ,ವೈದ್ಯಕೀಯ ಕಾಲೇಜುನಿರ್ದೇಶಕ ಡಾ.ಸಿದ್ದಪ್ಪ, ಆಡಳಿತ ಮಂಡಳಿ ಸದಸ್ಯರಾದ ಡಾ.ಗೌತಮ್, ವಾಣಿ ಕೋರಿ, ದಿವಕರ ಶೆಟ್ಟಿ, ಜಿಲ್ಲಾ ಸರ್ಜನ್ ಡಾ.ರಘುನಂದನ್ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.