ಶಿಕಾರಿಪುರ: ‘ರಂಗಭೂಮಿ ಕಲೆ ಉಳಿಸಿ ಬೆಳೆಸಲು ಪ್ರೇಕ್ಷಕರು ಪ್ರೋತ್ಸಾಹ ನೀಡಬೇಕು’ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಪ್ರಸನ್ನ ಡಿ. ಸಾಗರ ಮನವಿ ಮಾಡಿದರು.
ಪಟ್ಟಣದ ಗುಡಿ ಸಾಂಸ್ಕೃತಿಕ ಕೇಂದ್ರದಲ್ಲಿ ಈಚೆಗೆ ಸ್ನೇಹರಂಗ, ಗುಡಿ ಸಾಂಸ್ಕೃತಿಕ ಕೇಂದ್ರ, ಬಾಪೂಜಿ ವಿದ್ಯಾಸಂಸ್ಥೆ, ಸುವ್ವಿ ಪಬ್ಲಿಕೇಶನ್ ಆಶ್ರಯದಲ್ಲಿ ನಡೆದ ಆಪ್ತರಂಗ ಪ್ರಯೋಗದ ‘ಲೀಕೌಟ್’ ನಾಟಕ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಂಗಭೂಮಿ ಕ್ಷೇತ್ರ ಉಳಿಸಿ ಬೆಳೆಸಲು ನಿರಂತರ ಚಟುವಟಿಕೆಗಳು ನಡೆಯಬೇಕು. ಯುವಪೀಳಿಗೆ ರಂಗಭೂಮಿ ಕ್ಷೇತ್ರದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಸಾರ್ವಜನಿಕರು ನಾಟಕ ವೀಕ್ಷಿಸುವ ಮೂಲಕ ರಂಗಭೂಮಿ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಸ್ನೇಹ ರಂಗ ಅಧ್ಯಕ್ಷ ಕೊಪ್ಪಲು ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು.
ಗುಡಿ ಸಾಂಸ್ಕೃತಿಕ ಕೇಂದ್ರದ ಸಂಸ್ಥಾಪಕ ಇಕ್ಬಾಲ್ ಅಹಮದ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಕೆ.ಎಸ್. ಹುಚ್ರಾಯಪ್ಪ, ಬಾಪೂಜಿ ವಿದ್ಯಾ ಸಂಸ್ಥೆ ಸಂಸ್ಥಾಪಕ ಬಿ.ಪಾಪಯ್ಯ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎಲ್.ರಾಜು, ಸುವ್ವಿ ಪಬ್ಲಿಕೇಷನ್ ಪ್ರಕಾಶಕ ಬಿ.ಎನ್. ಸುನಿಲ್ ಕುಮಾರ್, ವಕೀಲ ಎಂ.ಎಚ್.ಸತ್ಯನಾರಾಯಣ, ಕೆಂಗಟ್ಟೆ ಲಕ್ಷ್ಮಣ, ಈಶ್ವರ, ಲೋಕೇಶ್ ಮಕರಿ, ಜಿಯಾವುಲ್ಲಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.