ಜೈಲು ಶಿಕ್ಷೆ (ಪ್ರಾತಿನಿಧಿಕ ಚಿತ್ರ)
ಶಿವಮೊಗ್ಗ: ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಬೀಡಿ ಸೇದಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಕೈದಿಗಳು ಗಲಾಟೆ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಜೆ ಸಂಬಂಧಿಸಿದಂತೆ 21 ಕೈದಿಗಳ ವಿರುದ್ಧ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಆರ್.ಅನಿತಾ ಸೋಮವಾರ ಇಲ್ಲಿನ ತುಂಗಾ ನಗರ ಠಾಣೆಯಲ್ಲಿ ಎಫ್‌ಐಐಆರ್ ದಾಖಲಿಸಿದ್ದಾರೆ.
ಬೀಡಿ ಪೂರೈಸುವಂತೆ ಒತ್ತಾಯಿಸಿ ಕಾರಾಗೃಹದ ಕೈದಿಗಳು ಸೆ.2ರಂದು ಪ್ರತಿಭಟನೆ ನಡೆಸಿದ್ದರು. ಅದು ಈಗ ಉಗ್ರ ರೂಪ
ತಾಳಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಸಹ ಅರೋಪಿಗಳಲ್ಲಿ ಇಬ್ಬರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಆಗಿನಿಂದಲೂ ಇಲ್ಲಿ ಬಿಗಿ ಕ್ರಮ ಕೈಗೊಂಡಿದ್ದು, ಇದೂ ಕೂಡ ಕೈದಿಗಳ ಪ್ರತಿಭಟನೆಗೆ ಕಾರಣವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.