ಸೊರಬ: ‘ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ, ಸಹಕಾರ ನೀಡುವ ಮೂಲಕ ತಾಲ್ಲೂಕಿನ ಸಮೀಕ್ಷೆ ಯಶಸ್ಸಿಗೆ ಸಹಕಾರ ನೀಡಿದ್ದು, ಅವರಿಗೆ ಸಾರ್ವಜನಿಕರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ’ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ತಮ್ಮ ಇಚ್ಛಾಶಕ್ತಿ ಮೂಲಕ ಸೇವೆ ಸಲ್ಲಿಸಿರುವುದಕ್ಕೆ ಪಕ್ಷ ಕೃತಜ್ಞತೆ ಸಲ್ಲಿಸುತ್ತದೆ. ತಾಲ್ಲೂಕಿನ ಶಿಕ್ಷಕ ಮಂಜುನಾಥ್ ದ್ಯಾಮಲಾ ನಾಯಕ್ ಎನ್ನುವವರು ಗರಿಷ್ಠ ಮಿತಿಯಲ್ಲಿ ಸಮೀಕ್ಷೆ ನಡೆಸಿ ಮುಂಚೂಣಿಯಲ್ಲಿದ್ದಾರೆ. ಅವರನ್ನು ಒಳಗೊಂಡಂತೆ ಸಮೀಕ್ಷೆಯಲ್ಲಿ ಭಾಗವಹಿಸಿ ಶೇ 100ರಷ್ಟು ಪೂರ್ಣಗೊಳಿಸಿದ ಎಲ್ಲ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.
‘ಕೆಲವು ಭಾಗದಲ್ಲಿ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗೆ ರಜೆ ಮುಂದೂಡಿ ಸಮೀಕ್ಷೆಯನ್ನು ಸಮಾರೋಪಾದಿಯಲ್ಲಿ ನಡೆಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ’ ಎಂದು ಜಿ.ಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ ತಿಳಿಸಿದರು.
ಈ ವೇಳೆ ತಾ.ಪಂ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್ ಮಾತನಾಡಿದರು.
ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಪ್ರವೀಣಕುಮಾರ್ ಶಾಂತಗೇರಿ, ಆಶ್ರಯ ಸಮಿತಿ ಸದಸ್ಯ ನೆಹರೂ ಕೊಡಕಣಿ, ಮುಖಂಡರಾದ ಪ್ರಕಾಶ್ ಹಳೇಸೊರಬ, ಸತ್ಯನಾರಾಯಣ ಕಡಸೂರು, ದರ್ಶನ್, ರಶೀದ್ ಸಾಬ್, ನಾಗಪ್ಪ ಮೇಷ್ಟ್ರು, ಆಫ್ರಿನಾ ಬಾನು, ಈರೇಶ್ ಮೇಸ್ತ್ರಿ, ಶಿವಣ್ಣ, ರಾಘು ಶಿಗ್ಗಾ, ಈಶ್ವರ್ ಮರೂರು ಇದ್ದರು.
ಸೊರಬ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ಸಹಕಾರ ನೀಡುವ ಮೂಲಕ ತಾಲ್ಲೂಕಿನ ಸಮೀಕ್ಷೆ ಯಶಸ್ವಿಗೆ ಸಹಕಾರ ನೀಡಿದ್ದು ಅವರಿಗೆ ಸಾರ್ವಜನಿಕರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ತಮ್ಮ ಇಚ್ಛಾಶಕ್ತಿ ಮೂಲಕ ಸೇವೆ ಸಲ್ಲಿಸಿರುವುದಕ್ಕೆ ಪಕ್ಷದ ವತಿಯಿಂದ ಕೃತಜ್ಞತೆ ಸಲ್ಲಿಸುತ್ತದೆ. ತಾಲ್ಲೂಕಿನ ಶಿಕ್ಷಕ ಮಂಜುನಾಥ್ ದ್ಯಾಮಲಾ ನಾಯಕ್ ಎನ್ನುವವರು ಗರಿಷ್ಠ ಮಿತಿಯಲ್ಲಿ ಸಮೀಕ್ಷೆ ನಡೆಸಿ ಮುಂಚೂಣಿಯಲ್ಲಿದ್ದಾರೆ. ಅವರನ್ನು ಒಳಗೊಂಡಂತೆ ಸಮೀಕ್ಷೆಯಲ್ಲಿ ಭಾಗವಹಿಸಿ ಶೇ.100ರಷ್ಟು ಪೂರ್ಣಗೊಳಿಸಿದ ಎಲ್ಲಾ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ಜನರ ಆರ್ಥಿಕ ಶೈಕ್ಷಣಿಕ ವ್ಯವಸ್ಥೆಯನ್ನು ಸಮಾಜಕ್ಕೆ ತಿಳಿಸುವ ಉದ್ದೇಶದಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ. ಕೆಲವು ಭಾಗದಲ್ಲಿ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗೆ ರಜೆ ಮುಂದೂಡಿ ಸಮೀಕ್ಷೆಯನ್ನು ಸಮಾರೋಪಾದಿಯಲ್ಲಿ ನಡೆಸಲು ಸೂಚಿಸಿದ್ದಾರೆ ಎಂದು ಜಿ.ಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ ತಿಳಿಸಿದರು. ರಾಜ್ಯದಲ್ಲಿ ಜಾತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲು ಸರ್ಕಾರ ಮುಂದಾಗಿದೆ. ಒತ್ತಡದ ನಡುವೆಯೂ ಶಿಕ್ಷಕರು ತಮ್ಮ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯದಲ್ಲಿ ನಡೆಸುತ್ತಿರುವ ಸಮೀಕ್ಷೆಗಾಗಿ ಬಿಜೆಪಿ ನಾಯಕರು ಕೇಂದ್ರದಲ್ಲಿ ನಡೆಸುವುದಾಗಿ ತಿಳಿಸಿದ್ದಾರೆ. ಇದು ಅವರ ದ್ವಂದ್ವ ನಿಲುವಾಗಿದ್ದು ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಣೆ ಬಗ್ಗೆ ವಿರೋಧಿಸಿದ ಬಿಜೆಪಿಯವರು ಬೇರೆ ರಾಜ್ಯದ ಚುನಾವಣೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡಿದ್ದಾರೆ. ಜಿಎಸ್ ಟಿ ತೆರಿಗೆ ಹೆಚ್ಚಿಸಿ ಸಾಮಾನ್ಯ ಜನರನ್ನು ಶೋಷಣೆ ಮಾಡಿಸಿ ನಂತರ ಇಳಿಸಿ ಪಟಾಕಿ ಹೊಡೆಯುವುದು ಹಾಸ್ಯಾಸ್ಪದ ಎಂದು ತಾ.ಪಂ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ ತಿಳಿಸಿದರು. ತಾಲ್ಲೂಕಿನಲ್ಲಿ 322 ವಿಭಾಗಗಳನ್ನು ಮಾಡಿ 322 ಶಿಕ್ಷಕರು ಸಮೀಕ್ಷೆಯಲ್ಲಿ ಭಾಗವಹಿಸಿದ್ದಾರೆ. 60 ಪ್ರಶ್ನೆಗಳಿಗೆ ತಾಳ್ಮೆಯಿಂದ ಮಾಹಿತಿ ನೀಡಿದ ಸಾರ್ವಜನಿಕರಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆ. ಜೊತೆಗೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸಮಾಧಿ ಸ್ಥಳವನ್ನು ಪ್ರವಾಸಿ ತಾಣವಾಗಿ ಘೋಷಣೆ ಮಾಡಲಾಗಿದ್ದು ಅವರ ಅಭಿಮಾನಿಗಳಿಗೆ ಸಂತೋಷ ತಂದಿದೆ ಎಂದು ಬಗರು ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ ಶೇಖರ್ ತಿಳಿಸಿದರು.. ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಪ್ರವೀಣಕುಮಾರ್ ಶಾಂತಗೇರಿ ಆಶ್ರಯ ಸಮಿತಿ ಸದಸ್ಯ ನೆಹರೂ ಕೊಡಕಣಿ ಮುಖಂಡರಾದ ಪ್ರಕಾಶ್ ಹಳೇಸೊರಬ ಸತ್ಯನಾರಾಯಣ ಕಡಸೂರು ದರ್ಶನ್ ರಶೀದ್ ಸಾಬ್ ನಾಗಪ್ಪ ಮೇಷ್ಟ್ರು ಆಫ್ರಿನಾ ಬಾನು ಈರೇಶ್ ಮೇಸ್ತ್ರಿ ಶಿವಣ್ಣ ರಾಘು ಶಿಗ್ಗಾ ಈಶ್ವರ್ ಮರೂರು ಇದ್ದರು. ಬಾಕ್ಸ್ ಸಚಿವ ಮಧು ಬಂಗಾರಪ್ಪ ಅವರು ಚಂದ್ರಗುತ್ತಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಿ ಅಭಿವೃದ್ಧಿಗೆ ₹3 ಕೋಟಿ ಅನುದಾನ ಬಿಡುಗಡೆಗೊಂಡಿದ್ದು ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದೆ. ರಸ್ತೆ ಅಭಿವೃದ್ಧಿಗೂ ₹100 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಗಣಪತಿ ಹುಲ್ತಿಕೊಪ್ಪ. ತಾ.ಪಂ ಮಾಜಿ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.