ADVERTISEMENT

ಸೊರಬ: ಪಟ್ಟಣದಲ್ಲಿ ಗುಡ್ ಫ್ರೈಡೆ ಆಚರಣೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2025, 13:42 IST
Last Updated 18 ಏಪ್ರಿಲ್ 2025, 13:42 IST
ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಶುಕ್ರವಾರ ಪ್ರಾರ್ಥನೆ ನಡೆಯಿತು
ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಶುಕ್ರವಾರ ಪ್ರಾರ್ಥನೆ ನಡೆಯಿತು   

ಸೊರಬ: ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.

ಪಟ್ಟಣದ ಹೊಸಪೇಟೆ ಬಡಾವಣೆಯ ಸಂತ ಸೆಬಾಸ್ಟಿಯನ್ ಚರ್ಚ್ ಆವರಣದಲ್ಲಿ ಯೇಸುವಿನ ಜೀವನ ವೃತ್ತಾಂತ ತಿಳಿಸುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.

ಚರ್ಚ್ ಧರ್ಮಗುರು ಫಾದರ್ ರಾಬರ್ಟ್ ಡಿ'ಮೆಲ್ಲೋ ಧರ್ಮ ಸಂದೇಶ ನೀಡಿದರು. ‘ಶೋಷಿತರ ಕಣ್ಣೀರನ್ನು ಒರೆಸುವ, ಸತ್ಯ ಮಾರ್ಗದಲ್ಲಿ ಜಗತ್ತನ್ನು ಮುನ್ನಡೆಸಬಲ್ಲ ಮಹಾಶಕ್ತಿಯಾಗಿರುವ ಯೇಸು ಜಗದ ದುಃಖವನ್ನು ತೊಡೆಯಲು ಶಕ್ತನಾಗಿದ್ದಾರೆ. ಜಗತ್ತಿನಾದ್ಯಂತ ಇರುವ ಕೆಟ್ಟತನಕ್ಕೆ ಯೇಸುವಿನ ಪ್ರೀತಿ, ಕರುಣೆ, ಕ್ಷಮೆ, ಔದಾರ್ಯಗಳು ಔಷಧವಾಗಬೇಕು. ಹೊಣೆಗೇಡಿತನ, ಕ್ರೋಧ, ತಿಳಿಗೇಡಿತನಕ್ಕೆ ಯೇಸು ಉತ್ತರವಾಗಿದ್ದಾರೆ. ಯೇಸುಕ್ರಿಸ್ತ ಶಿಲುಬೆಯನ್ನು ಹೊತ್ತು ನಡೆದಂತೆ ನಾವೂ ಜೀವನದಲ್ಲಿ ಎದುರಾಗುವ ಕಷ್ಟ, ಸಾವು, ನೋವು, ಸಂಕಟಗಳನ್ನು ಎದುರಿಸಿ ಮುನ್ನಡೆಯಬೇಕಿದೆ. ಸ್ವಾರ್ಥ ತ್ಯಜಿಸಿ ಪರರ ಪ್ರೀತಿಯಲ್ಲಿ ಬದುಕಲು ದೇವರು ತೋರಿರುವ ದಾರಿಯೇ ಶಿಲುಬೆಯ ಹಾದಿ’ ಎಂದು ಅವರು ಹೇಳಿದರು.

ADVERTISEMENT

ತಾಲೂಕಿನ ಇಂಡುವಳ್ಳಿ ಚರ್ಚ್ ಹಾಗೂ ಆನವಟ್ಟಿಯ ಯೇಸುಕ್ರಿಸ್ತನ ಆಶ್ರಮದಲ್ಲಿಯೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.