ADVERTISEMENT

‘ತಾಲ್ಲೂಕಿನ ಅಭಿವೃದ್ಧಿಗೆ ವಿಶೇಷ ಆಸಕ್ತಿ’

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 4:41 IST
Last Updated 12 ಡಿಸೆಂಬರ್ 2025, 4:41 IST
ಸೊರಬ ಪಟ್ಟಣದ ಅಂಬೇಡ್ಕರ್ ಬಡಾವಣೆಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು
ಸೊರಬ ಪಟ್ಟಣದ ಅಂಬೇಡ್ಕರ್ ಬಡಾವಣೆಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು   

ಸೊರಬ: ತಾಲ್ಲೂಕಿನ ಅಭಿವೃದ್ಧಿಗೆ ಸಚಿವ ಮಧು ಬಂಗಾರಪ್ಪ ಅವರು ವಿಶೇಷ ಅನುದಾನ ತಂದಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ ಹೇಳಿದರು.

ಪಟ್ಟಣದ ಅಂಬೇಡ್ಕರ್ ಬಡಾವಣೆ ಹಾಗೂ ರಾಘವೇಂದ್ರ ಬಡಾವಣೆಗೆ ಕೊಳಚೆ ನಿರ್ಮೂಲನಾ ಮಂಡಳಿ ಯೋಜನೆಯಡಿಯಲ್ಲಿ ₹ 1ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸದೃಢವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ತಾಲ್ಲೂಕಿನ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿ ಮೂಲ ಸವಲತ್ತುಗಳನ್ನು ನೀಡಿದ್ದಾರೆ. ತಾಲ್ಲೂಕಿನ ನೀರಾವರಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಅನುದಾನ ತರುವಲ್ಲಿ ಮುತುವರ್ಜಿ ವಹಿಸಿದ್ದಾರೆ. ಅಷ್ಟೇ ಅಲ್ಲದೇ ಅವಶ್ಯಕತೆ ಇರುವ ಕಾಮಗಾರಿಗಳ ಪಟ್ಟಿ ಮಾಡಿ ಸಂಬಂಧಪಟ್ಟ ಇಲಾಖಾ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕೂಡಲೇ ಕಾಮಗಾರಿ ಪ್ರಾರಂಭಿಸಲಾಗುವುದು. ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೂ ರಸ್ತೆ, ಕುಡಿಯುವ ನೀರು, ಚರಂಡಿ ದುರಸ್ತಿಗೆ ಆದ್ಯತೆ ನೀಡಲಾಗುವುದು. ಅಧಿಕಾರಿಗಳು ಈ ಬಗ್ಗೆ ಸ್ಥಳೀಯ ನಿವಾಸಿಗಳ ಕುಂದು ಕೊರತೆಗಳನ್ನು ಆಲಿಸಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖ‌ರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಆಶ್ರಯ ಸಮಿತಿ ಅಧ್ಯಕ್ಷ ಪ್ರಶಾಂತ್ ಮೇಸ್ತ್ರಿ, ಸದಸ್ಯ ನೆಹರೂ ಕೊಡಕಣಿ, ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಅತಿಕ್, ಪ್ರಕಾಶ್ ಹಳೇಸೊರಬ, ಫಯಾಜ್ ಅಹಮದ್, ಆಫ್ರಿನಾಬಾನು, ರಶೀದ್ ಸಾಬ್, ಕೋಲಾರ ಕೃಷ್ಣಪ್ಪ, ರಾಜು ಹಿರಿಯಾವಲಿ, ಪರಶುರಾಮ ಸಣಬೈಲ್, ಸುಜಾಯತ್ ವುಲ್ಲಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.